ಉತ್ತರ ಪ್ರದೇಶ : ಜವರಾಯ ಎಲ್ಲಿ, ಯಾವಾಗ, ಹೇಗೆ ಅಟ್ಟಹಾಸ ಮೆರೆಯುತ್ತಾನೆ ಎಂದು ಯಾರೂ ಕೂಡ ಊಹಿಸಲು ಸಾಧ್ಯವಾಗುವುದಿಲ್ಲ. ಯಾಕೆಂದರೆ ಮದುವೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ನವ ಜೋಡಿ ಮಸಣದ ಬಾಗಿಲು ಸೇರಿದ್ದಾರೆ.
ಹೌದು, ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಭಾರೀ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ನವವಿವಾಹಿತರು ಸೇರಿ ಐವರು ಸಾವನ್ನಪ್ಪಿದ್ದಾರೆ. ಬಿಜ್ನೋರ್‌ನ ರಾಷ್ಟ್ರೀಯ ಹೆದ್ದಾರಿ-74ರಲ್ಲಿ ಭಾರೀ ಮಂಜು ಕವಿದ್ದಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಅವರಿದ್ದ ವಾಹನ ಟೆಂಪೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಹಳ್ಳಕ್ಕೆ ಬಿದ್ದಿವೆ. ಅಪಘಾತದ ಪರಿಣಾಮ ಏಳು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಘಟನೆಗೆ ಉತ್ತರ ಪ್ರದೇಶ ಮುಖ್ಯಂತ್ರಿ ಯೋಗಿ ಆದಿತ್ಯನಾತ್ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.