ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ, ಬೆಂಗಳೂರಿನ ದಾಸರಹಳ್ಳಿಯ ಚೊಕ್ಕಸಂದ್ರದ ಮನೆಯೊಂದರಲ್ಲಿ ನಡೆದಿದೆ. ಗಾಯಗೊಂಡವರನ್ನು ದಿಜುಧಾರ್, ಅಂಜಲಿದಾಸ್, ಮನುಶ್ರೀ, ಮನು, ತಿಪ್ಪೇರುದ್ರಸ್ವಾಮಿ ಹಾಗೂ ಇವರ ಮನೆಯ ಪಕ್ಕದ ಶೋಭ ಹಾಗೂ ಕರಿಬುಲ್ಲ ಎಂಬುವರಿಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡಿರುವ ದಿಜುಧಾರ್ ಎಂಬುವವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿದ್ದು, ಸ್ಫೋಟದ ತೀವ್ರತೆಗೆ ಪಕ್ಕದ ಮನೆಯವರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.