ರಾಜ್ಯದಲ್ಲಿ ಮುಡಾ ಹಗರಣ ಸದ್ದು ಮಾಡುತ್ತಿದ್ದಂತೆ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂಬ ಚರ್ಚೆಗಳು ಜೋರಾಗಿಯೇ ನಡೆಯುತ್ತಿದ್ದವು. ಇದರ ನಡುವೆ ಚನ್ನಪಟ್ಟಣ ಚುನಾವಣಾ ಪ್ರಚಾರದಲ್ಲಿ ಶಿವಲಿಂಗೇಗೌಡ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಿಎಂ ಆಗುವ ಸಾಧ್ಯತೆಗಳಿವೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಚನ್ನಪಟ್ಟಣ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಶಾಸಕ ಶಿವಲಿಂಗೇಗೌಡ, ಡಿಸಿಎಂ ಡಿಕೆಶಿ ಅವರ ಮುಖ್ಯಮಂತ್ರಿ ಸ್ಥಾನದ ಭವಿಷ್ಯ ನಿರ್ಧರಿಸುತ್ತೆ ಈ ಚನ್ನಪಟ್ಟಣ ಉಪಚುನಾವಣೆ ಎಂದು ಹೇಳಿದ್ದಾರೆ. ಅಲ್ಲದೇ ಡಿ.ಕೆ.ಶಿವಕುಮಾರ್ ಅವರು ನಿಮ್ಮದೇ ಜಿಲ್ಲೆಯವರು. ಅವರೇ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳಿವೆ. ನಿಮ್ಮ ಜಿಲ್ಲೆಯವರನ್ನೇ ಕೈ ಬಿಟ್ಟರೆ ಹೇಗಿರುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ