ಕರ್ನಾಟಕ

ನನ್ನ ಈಗಿನ ಪರಿಸ್ಥಿತಿಗೆ ಸ್ವಪಕ್ಷವೇ ಕಾರಣ: ಸಿಎಂ ಸ್ಪೋಟಕ ಹೇಳಿಕೆ.!

ಕೆಲ ದಿನಗಳ ಹಿಂದೆ ಸಿಎಂ ಅವರು ಹೇಳಿಕೆ ನೀಡಿ, ಪ್ರತಿಪಕ್ಷಗಳು ನನ್ನ ವಿರುದ್ಧ ಪಿತೂರಿ ಮಾಡುತ್ತಿವೆ, ನಾನು ಹಿಂದುಳಿದ ವರ್ಗದವನು ಎಂದು ಅವರಿಗೆ ಹೊಟ್ಟೆ ಉರಿ ಎಂದು ಹೇಳಿದ್ದರು. ಅದಾದ ಮೇಲೆ ಬೆಳಗಾವಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಕಾರ್ಯಕ್ರಮದಲ್ಲಿ, ಸಂಗೊಳ್ಳಿ ರಾಯಣ್ಣ ಅವರನ್ನು ಹಿತಶತ್ರುಗಳೇ ಬ್ರಿಟಿಷರಿಗೆ ಹಿಡಿದುಕೊಟ್ಟರು. ನನ್ನನ್ನು ರಾಜಕೀಯವಾಗಿ ಮುಗಿಸಲು ಸ್ವಪಕ್ಷೀಯರೇ ಹುನ್ನಾರ ನಡೆಸುತ್ತಿದ್ದಾರೆ ಎಂದು ಹೇಳಿದ್ದರು.

ಶಿವಮೊಗ್ಗ: ಮುಡಾ ಪ್ರಕಣ ರಾಜ್ಯ ರಾಜಕೀಯದಲ್ಲಿ ಬಾರಿ ಸುದ್ದಿ ಮಾಡುತ್ತಿದೆ. ಈ ವಿಚಾರವಾಗಿ ನನ್ನನ್ನು ರಾಜಕೀಯವಾಗಿ ಮುಗಿಸಲು ಸ್ವಪಕ್ಷೀಯರೇ ಪಿತೂರಿ ನಡೆಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಈ ವಿಚಾರವನ್ನ  ಶಿವಮೊಗ್ಗದ ಪ್ರೆಸ್ ಕ್ಲಬ್ ನಲ್ಲಿ ಪ್ರಸ್ತಾಪಿಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯನವರ ಹೇಳಿಕೆ ಪ್ರಕಾರ ಪ್ರತಿಪಕ್ಷಗಳು ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಯಾವುದೇ ತಂತ್ರ ಮಾಡುತ್ತಿಲ್ಲ ಎನ್ನುವುದನ್ನು ಅವರೇ ಒಪ್ಪಿಕೊಂಡಂತಾಯಿತು ಎಂದು  ಹೇಳಿದರು.

ಕೆಲ ದಿನಗಳ ಹಿಂದೆ ಸಿಎಂ ಅವರು ಹೇಳಿಕೆ ನೀಡಿ, ಪ್ರತಿಪಕ್ಷಗಳು ನನ್ನ ವಿರುದ್ಧ ಪಿತೂರಿ ಮಾಡುತ್ತಿವೆ, ನಾನು ಹಿಂದುಳಿದ ವರ್ಗದವನು ಎಂದು ಅವರಿಗೆ ಹೊಟ್ಟೆ ಉರಿ ಎಂದು ಹೇಳಿದ್ದರು. ಅದಾದ ಮೇಲೆ ಬೆಳಗಾವಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಕಾರ್ಯಕ್ರಮದಲ್ಲಿ, ಸಂಗೊಳ್ಳಿ ರಾಯಣ್ಣ ಅವರನ್ನು ಹಿತಶತ್ರುಗಳೇ ಬ್ರಿಟಿಷರಿಗೆ ಹಿಡಿದುಕೊಟ್ಟರು. ನನ್ನನ್ನು ರಾಜಕೀಯವಾಗಿ ಮುಗಿಸಲು ಸ್ವಪಕ್ಷೀಯರೇ ಹುನ್ನಾರ ನಡೆಸುತ್ತಿದ್ದಾರೆ ಎಂದು ಹೇಳಿದ್ದರು. ಈಗಲಾದರೂ ಮುಖ್ಯಮಂತ್ರಿಯವರಿಗೆ ತಮ್ಮ ವಿರುದ್ಧ ಸಂಚು ಮಾಡುತ್ತಿರುವವರು ಯಾರು ಎನ್ನುವುದು ಅರ್ಥವಾಗಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಮಾಡಿಕೊಂಡ ತಪ್ಪುಗಳು, ಅವರಲ್ಲಿ ನಡೆಯುತ್ತಿರುವ ಸಂಚು ಒಳಸಂಚುಗಳ ಪರಿಣಾಮ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಬಂದಿದೆ ಎಂದು ಸಚಿವರು ದೂರಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ನಿರಂತರವಾಗಿ ತೊಡಗಿದೆ, ಗುತ್ತಿಗೆದಾರರನ್ನು ಸುಲಿಗೆ ಮಾಡುತ್ತಿದೆ, ಸಿದ್ದರಾಮಯ್ಯ ಅವರ ಇಂದಿನ ಸ್ಥಿತಿಗೆ ಅವರ ಸ್ವಯಂಕೃತ ಅಪರಾಧವೇ ಕಾರಣ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಸುಲಿಗೆ ಮಾಡಲು ಶುರು ಮಾಡಿದೆ. ಅದು ಈಗಲೂ ಮುಂದುವರೆದಿದೆ ಎಂದರು.