ವಿಕೃತ ಕಾಮಿಯೊಬ್ಬ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದಿರುವ ಘಟನೆ, ಬೆಂಗಳೂರಿನ ಹೊಯ್ಸಳ ನಗರದ ವಿನಾಯಕ ಲೇಔಟ್‌ನಲ್ಲಿ ನಡೆದಿದೆ. ಬಿಹಾರ ಮೂಲದ ಅಭಿಷೇಕ್ ಎಂಬಾತನಿಂದ. ನಿರ್ಮಾಣ ಹಂತದ ಕಟ್ಟಡದಲ್ಲಿ ಕೃತ್ಯ ನಡೆದಿದೆ. ಆರೋಪಿಯನ್ನು ಹಿಡಿದ ಸ್ಥಳೀಯರು ಥಳಿಸಿದ್ದಾರೆ. ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಹಿಡಿದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮೃತ ಬಾಲಕಿಯನ್ನು ನೇಪಾಳ ಮೂಲದವರು ಎನ್ನಲಾಗಿದೆ.