ಬೆಂಗಳೂರು: ಎಸ್‌ಎಂ ಕೃಷ್ಣ ಸಿಎಂ ಆಗಿದ್ದಾಗ ರೈತರು ಗಂಧದ ಮರವನ್ನು ಬೆಳೆಯಲು ಅವಕಾಶ ಮಾಡಿಕೊಟ್ಟಿದ್ದರು. ಈ ಹಿನ್ನೆಲೆ 1,000 ಕೆಜಿ ಗಂಧದ ಕಟ್ಟಿಗೆಯಲ್ಲಿ ಎಸ್‌ಎಂ ಕೃಷ್ಣ ಅವರ ಅಂತಿಮ ಸಂಸ್ಕಾರ ನೇರವೆರಿಸಲಾಗುತ್ತದೆ ಎಂದು ಶಾಸಕ ಗಣಿಗ ರವಿ ತಿಳಿಸಿದ್ದಾರೆ.
ಎಸ್‌ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯದ ನೂತನ ಹೆರಿಗೆ ಆಸ್ಪತ್ರೆಗೆ ಎಸ್‌ಎಂಕೆ ಹೆಸರು ಇಡಲು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದರು. ಅಲ್ಲದೇ ಮಂಡ್ಯದಲ್ಲಿ ಒಂದು ಪಾರ್ಕಿಗೆ ಎಸ್‌ಎಂ ಕೃಷ್ಣ ಅವರ ಹೆಸರು ಇಡಲಾಗುತ್ತದೆ ಎಂದು ಹೇಳಿದರು.