ಕರ್ನಾಟಕ

ಕಣ್ಣೆದುರೇ ಇರುವ ಸತ್ಯವನ್ನು ಸುಳ್ಳೆಂದು ಬಿಂಬಿಸಿ ಬಕ್ರಾ ಮಾಡಲು ಯತ್ನಿಸುತ್ತಾರೆ.. ಈ ರೀತಿ ಸಿಎಂ ಹೇಳಿದ್ಯಾರಿಗೆ..?

ಎತ್ತಿನ ಹೊಳೆ ಯೋಜನೆಯ ಅನುಕೂಲ ಜನರಿಗೆ ತಲುಪಲಿದೆ. ಇಂದು ಈ ಮಹತ್ವದ ಯೋಜನೆ ಯಶಸ್ವಿಯಾಗಿ ಲೋಕಾರ್ಪಣೆಯಾಗಿದೆ. ಹೀಗಿದ್ರೂ ಕೆಲವರು ಸತ್ಯವನ್ನು ಸುಳ್ಳು ಮಾಡಿ ಬಕ್ರಾ ಮಾಡಲು ಯತ್ನಿಸುತ್ತಾರೆ. ಅಂತಹ ಮಾತುಗಳನ್ನು ಕೇಳಿಸಿಕೊಳ್ಳಬೇಡಿ ಎಂದು ಕರೆ ನೀಡಿದರು.

ಇಂದು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆಎಂದು ಸ್ಪಷ್ಟ ಭರವಸೆ ನೀಡಿದರು. 

ಜೊತೆಗೆ ಹೀಗಿದ್ದರೂ ಕೆಲವರು ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಕೆಲವರು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಕರೆ ನೀಡಿದರು. ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವಿ. ಕೆರೆಗಳನ್ನು ತುಂಬಿಸಿಯೇ ತೀರುವುದೂ ಶತಸಿದ್ಧ ಎಂದು ಗ್ಯಾರಂಟಿ ಮಾತುಗಳನ್ನಾಡಿದರು. ಅಲ್ಲದೇ ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಇದೇ ಸಂದರ್ಭದಲ್ಲಿ ಸ್ಪಷ್ಟ ಸೂಚನೆ ನೀಡಿದರು.