ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ಡಿಸಾನಾಯಕೆ ಡಿಸೆಂಬರ್ 17 ರವರೆಗೆ ಭಾರತ ಪ್ರವಾಸದಲ್ಲಿದ್ದಾರೆ. ಶ್ರೀಲಂಕಾ ಅಧ್ಯಕ್ಷರ ಭಾರತಕ್ಕೆ ಇದು ಮೊದಲ ರಾಜ್ಯ ಭೇಟಿಯಾಗಿದೆ. ಇನ್ನು ಅಧಿಕಾರ ವಹಿಸಿಕೊಂಡ ನಂತರ ಇದು ದಿಸಾನಾಯಕೆ ಅವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ.
ರಾಷ್ಟ್ರಪತಿ ಭವನ ಆಗಮಿಸಿದ ಶ್ರೀಲಂಕಾ ಅಧ್ಯಕ್ಷ ಡಿಸ್ಸಾನಾಯಕೆ ಅವರನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಬರಮಾಡಿಕೊಂಡರು. ಅನುರಾ ಕುಮಾರ ಡಿಸಾನಾಯಕೆ ಅವರಿಗೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ವಿಧ್ಯುಕ್ತ ಸ್ವಾಗತ ಕೋರಲಾಯಿತು.
ಬಳಿಕ ತಮ್ಮ ಸಚಿವರು, ರಾಜತಾಂತ್ರಿಕರು ಮತ್ತು ಅಧಿಕಾರಿಗಳಿಗೆ ಪರಸ್ಪರ ಪರಿಚಯಿಸಿದರು.
ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ಡಿಸಾನಾಯಕೆ ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿಯೊಂದಿಗೆ ಶ್ರೀಲಂಕಾ ಅಧ್ಯಕ್ಷ ಮಾತುಕತೆ ನಡೆಸಿದ್ದಾರೆ.