ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 10 ಮಂದಿ ಸಾವನ್ನಪ್ಪಿದ್ದಾರೆ. ಇಂದು ಮೌನಿ ಅಮವಾಸ್ಯೆ ಹಿನ್ನೆಲೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಭಕ್ತರು ಸಾಗರೋಪಾದಿಲ್ಲಿ ಹರಿದು ಬಂದಿದ್ದು, ಈ ವೇಳೆ ಪ್ರಯಾಗ್ ರಾಜ್‌ನ ಸಂಗಮ್ ಘಾಟ್‌ನಲ್ಲಿ ಕಾಲ್ತುಳಿತ ಸಂಭವಿಸಿದೆ.
ಕಾಲ್ತುಳಿತದಲ್ಲಿ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆಯನ್ನ ನೀಡಲಾಗಿದೆ.