ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತ ಅತ್ಯಂತ ನೋವು ತಂದಿದೆ. ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವನ್ನು ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಯೂ ಮಾತನಾಡಿದ್ದೇನೆ. ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆಂದು ತಿಳಿಸಿದ್ದಾರೆ. ಮತ್ತೊಂದೆಡೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೂ ಸಂತಾಪ ವ್ಯಕ್ತಪಡಿಸಿದ್ದು, ಕಾಲ್ತುಳಿತ ಘಟನೆಯಿಂದ ಅತ್ಯಂತ ನೋವಾಗಿದೆ. ತಮ್ಮ ಕುಟುಂಬಸ್ಥರನ್ನು ಕಳೆದುಗೊಂಡ ಭಕ್ತಾರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.