ಕರ್ನಾಟಕ

ಸಿಎಂ ನೇತೃತ್ವದಲ್ಲಿ 2025-26ನೇ ಸಾಲಿನ ರಾಜ್ಯ ಬಜೆಟ್ ಪೂರ್ವಭಾವಿ ಸಭೆ

ಹಣಕಾಸು ಇಲಾಖೆಯ ಜವಾಬ್ದಾರಿಯನ್ನೂ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26 ನೇ ಸಾಲಿನ ಬಜೆಟ್‌ ಅನ್ನು ಮಾರ್ಚ್‌ ಮೊದಲ ವಾರದಲ್ಲಿ ಮಂಡಿಸುವ ಸಾಧ್ಯತೆ ಇದೆ.

ಬೆಂಗಳೂರು : 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು 2ನೇ ದಿನದ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಇಲಾಖಾವಾರು ಸಭೆ ನಡೆಸಲಿದ್ದಾರೆ. 

ಹಣಕಾಸು ಇಲಾಖೆಯ ಜವಾಬ್ದಾರಿಯನ್ನೂ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26 ನೇ ಸಾಲಿನ ಬಜೆಟ್‌ ಅನ್ನು ಮಾರ್ಚ್‌ ಮೊದಲ ವಾರದಲ್ಲಿ ಮಂಡಿಸುವ ಸಾಧ್ಯತೆ ಇದೆ. ಇದು ಸಿದ್ದರಾಮಯ್ಯ ಅವರ 16ನೇ ಬಜೆಟ್‌ ಆಗಿದ್ದು, ಈ ಬಾರಿ ಸಿಎಂ ದಾಖಲೆಯ ಬಜೆಟ್‌ ಮಂಡಿಸಲಿದ್ದಾರೆ.

ಇಲಾಖಾವಾರು ಅಧಿಕಾರಿಗಳ ಜೊತೆ ಸಭೆ ನಿಗದಿ
- ಮಧ್ಯಾಹ್ನ 12 ಗಂಟೆಗೆ ಸಮಾಜ ಕಲ್ಯಾಣ, ಯೋಜನೆ, ಕಾರ್ಯಕ್ರಮ, ಸಂಯೋಜನೆ ಹಾಗೂ ಸಾಂಖ್ಯಿಕ ಸಭೆ.
- ಮಧ್ಯಾಹ್ನ 1 ಗಂಟೆಗ ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಸಭೆ ನಡೆಸಲಿರುವ ಸಿಎಂ.
- ಸಂಜೆ 4 ಗಂಟೆಗೆ ಜಲಸಂಪನ್ಮೂಲ, ಕಂದಾಯ, ಕೃಷಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಸ್, ವಸತಿ ಸಭೆ.