ಕರ್ನಾಟಕ
ರಾಜ್ಯ ಸರ್ಕಾರ ಬಿಜೆಪಿ ನಾಯಕರನ್ನ ಟಾರ್ಗೇಟ್ ಮಾಡುತ್ತಿದೆ : ಜಗದೀಶ್ ಶೆಟ್ಟರ್
ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲಾಗುತ್ತಿದೆ. ಈ ಹಿಂದೆ ಇಂದಿರಾ ಗಾಂಧಿ ಅವರ ಕಾಲದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಕೈಗೊಂಬೆಯಾಗಿ ಕೆಲಸ ಮಾಡಿದ್ದಾರೆ ಎಂದು ಶೆಟ್ಟರ್ ಗರಂ ಆದರು.
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಬಿಜೆಪಿ ಎಂಎಲಸಿ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಆರಪ ಸಂಬಂಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಸಿ.ಟಿ.ರವಿ ನಾನು ಅಂತಹ ಪದ ಬಳಸಿಲ್ಲಾ ಅಂತಾ ಹೇಳಿದ್ರು. ಅವರ ಮೇಲೆ ದೂರು ಕೊಟ್ಟು, ಎಫ.ಐ.ಆರ್ ದಾಖಲು ಮಾಡಿದ್ದಾರೆ. ನಾನು ಸ್ಪೀಕರ್ ಆಗಿ ಕೆಲಸ ಮಾಡಿರುವೆ. ಸ್ಪೀಕರ್ ಅನುಮತಿ ಇಲ್ಲದೇ ಬಂಧಿಸುವಂತಿಲ್ಲ. ಆ ನಿಯಮವನ್ನ ಪೊಲೀಸರು ಉಲ್ಲಂಘಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ನೋಟಿಸ್ ಕೊಡಬೇಕಿತ್ತು ಅದನ್ನು ಮಾಡಿಲ್ಲ. ಅವರ ಹೇಳಿಕೆಯನ್ನ ಪೊಲೀಸರು ಪರಿಶೀಲನೆ ಮಾಡಬೇಕಿತ್ತು ಅದನ್ನು ಮಾಡಿಲ್ಲ. ಸಭಾಪತಿ ಅವರೇ ಈ ಬಗ್ಗೆ ಯಾವುದೇ ದಾಖಲೆ ಇಲ್ಲ ಅಂತಾ ಹೇಳಿದ್ರು. ಸಿಎಂ, ಡಿಸಿಎಂ ಮತ್ತು ಬೆಳಗಾವಿ ಸಚಿವರು ಪೊಲೀಸ್ ಇಲಾಖೆ ಮೇಲೆ ಒತ್ತಡ ತಂದು ಅರೆಸ್ಟ್ ಮಾಡಿಸಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿ ನಾಯಕರನ್ನ ಟಾರ್ಗೆಟ್ ಮಾಡಲಾಗುತ್ತಿದೆ. ನ್ಯಾಯಾಧೀಶರ ಮುಂದೆ ಹಾಜರು ಪಡಿಸದೇ, 400 ಕಿಲೋಮೀಟರ್ ಸುತ್ತಾಡಿಸಿದ್ದಾರೆ. ಸಿ.ಟಿ.ರವಿ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲಾಗುತ್ತಿದೆ. ಈ ಹಿಂದೆ ಇಂದಿರಾ ಗಾಂಧಿ ಅವರ ಕಾಲದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಕೈಗೊಂಬೆಯಾಗಿ ಕೆಲಸ ಮಾಡಿದ್ದಾರೆ ಎಂದು ಶೆಟ್ಟರ್ ಗರಂ ಆದರು.