ಬೆಂಗಳೂರು: ಚಿಕ್ಕಿಯಲ್ಲಿ ಅಪರ್ಯಾಪ್ತ ಕೊಬ್ಬಿನಾಂಶ (ಅನ್‌ಸ್ಯಾಚುರೇಟೆಡ್ ಫ್ಯಾಟ್) ಹೆಚ್ಚಿಗೆ ಇನ್ನೆಲೆ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯನ್ನ ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ. ಬಿಸಿಯೂಟ ಯೋಜನೆಯಡಿ 1 ರಿಂದ 10ನೇ ತರಗತಿ ಮಕ್ಕಳಿಗೆ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯನ್ನ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಚಿಕ್ಕಿಯಲ್ಲಿ ಅನ್‌ಸ್ಯಾಚುರೇಟೆಡ್ ಫ್ಯಾಟ್ ಹೆಚ್ಚಿಗೆ ಇದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದೇ ಇದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಇರುವುದರಿಂದ ವಿತರಣೆ ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.