ವೈರಲ್

ದಾವಣಗೆರೆಯಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲುತೂರಾಟ..! ಅಷ್ಟಕ್ಕು ಆಗಿದ್ದೇನು?

ಐದು ದಿನ ಹಿಂದಷ್ಟೇ ಮೊಹರಂ ಹಬ್ಬದ ವೇಳೆ ಧ್ವಜ ಕಟ್ಟುವ ವಿಚಾರದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಯುವಕರ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂಬಂಧ ಹಿಂದೂ ಪರ ಸಂಘಟನೆ ಮುಖಂಡ ಸತೀಶ್ ಪೂಜಾರಿ ಪ್ರಚೋದನೆಕಾರಿ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಕಲ್ಲುತೂರಾಟ ಮಾಡಿದ್ದಾರೆ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ.

ದಾವಣಗೆರೆ: ಗಣೇಶನ ವಿಸರ್ಜನೆ ಸಮಯದಲ್ಲಿ ಎರಡು ಕೋಮುಗಳ ನಡುವೆ ಗಲಾಟೆ ನಡೆದು, ಮೆರವಣಿಗೆ ವೇಳೆ ಕಲ್ಲು ತುರಾಟ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಎಸ್ಪಿ ಉಮಪ್ರಶಾಂತ್ ಪರಿಸ್ಥಿತಿ ಶಾಂತಗೊಳಿಸಿದ್ದಾರೆ. ಆದರೆ ಈ ವೇಳೆ ನಡೆದ ಕಲ್ಲುತೂರಾಟದಲ್ಲಿ ಮಹಿಳಾ ಕಾನ್ ಸ್ಟೇಬರ್ ಸೇರಿದಂತೆ ಒಟ್ಟು ನಾಲ್ಕು ಮಂದಿಗೆ ಗಾಯಗಳಾಗಿವೆ.

ನಗರದ ವೆಂಕಟೇಶ್ವರ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಐದು ದಿನದ ಹಿಂದೆ ಮೊಹರಂ ಧ್ವಜ ಕಟ್ಟುವ ವಿಚಾರದಲ್ಲಿ ನಡೆದ ಗಲಾಟೆಯ ಮುಂದುವರಿದ ಭಾಗ ಇದು ಎಂದು ಹೇಳಲಾಗಿದೆ.