ಚಲಿಸುತ್ತಿದ್ದ ಕಾರಿನ ಮೇಲೆ ಮೊಟ್ಟೆ ಎಸೆದು ಕಾರು ನಿಲ್ಲಿಸಿ ದರೋಡೆ ಮಾಡಿರುವ ಘಟನೆ, ಮಂಡ್ಯದ ಬೂದನೂರು ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಬೈಕ್‌ನಲ್ಲಿ ಕಾರು ಹಿಂಬಾಲಿಸಿಕೊಂಡು ಬಂದ ಮೂವರು ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ. ಕಾರಿನ ಮೇಲೆ ಮೊಟ್ಟೆ ಎಸೆದು ಕಾರು ನಿಲ್ಲಿಸುತ್ತಿದ್ದಂತೆ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ್ದಾರೆ. ಬಳಿಕ ವ್ಯಕ್ತಿ ಬಳಿ ಇದ್ದ 55 ಸಾವಿರ ನಗದು ಸೇರಿ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ವಿನೋದ್ ಎನ್ನಲಾಗಿದೆ.
ಮದ್ದೂರಿನಿಂದ ಮಂಡ್ಯಕ್ಕೆ ಬರುವ ವೇಳೆ ಮಾರ್ಗ ಮಧ್ಯೆ ದರೋಡೆ ಮಾಡಿದ್ದಾರೆ. ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.