ಉಡುಪಿ : 9 ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದರು. ಆದರೆ ಇಂದು ಶವವಾಗಿ ಪತ್ತೆಯಾದ ಘಟನೆಯೊಂದು ಉಡುಪಿ ಜಿಲ್ಲೆ ಬೈಂದೂರಿನಲ್ಲಿ ನಡೆದಿದೆ.
ಮೊಹಮದ್ ಶಫಾನ್, ನಾಗೇಂದ್ರ ಎಂಬ ಮೃತ ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಕೆರೆಯಲ್ಲಿ ಈಜಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಈ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.