ವೈರಲ್

ಪ್ರವಾಸಕ್ಕೆ ಹೋದ ವಿದ್ಯಾರ್ಥಿಗಳು ಅಲೆಗಳ ಅಬ್ಬರಕ್ಕೆ ಸಿಲುಕಿ ಸಾವು

ಒಬ್ಬ ವಿದ್ಯಾರ್ಥಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸಾವನ್ನಪ್ಪಿದ್ದು, ಈ ಘಟನೆ ಮುರುಡೇಶ್ವರದಲ್ಲಿ ನಡೆದಿದೆ. ಗೌತಮ್ (17) ಎಂಬ ವಿದ್ಯಾರ್ಥಿ ಮೃತಪಟ್ಟಿದ್ದು, ಧನುಷ್ ಎಂಬ ವಿದ್ಯಾರ್ಥಿಯನ್ನು ರಕ್ಷಿಸಲಾಗಿದೆ.

ಮುರುಡೇಶ್ವರ : ಬೆಂಗಳೂರಿನ ವಿದ್ಯಾಸೌಧ ಪಿಯು ಕಾಲೇಜಿನ ವಿದ್ಯಾರ್ಥಿಗಳು ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ನೀರುಪಾಲಾದ ದುರ್ಘಟನೆಯೊಂದು ನಡೆದಿದೆ. ಒಬ್ಬ ವಿದ್ಯಾರ್ಥಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸಾವನ್ನಪ್ಪಿದ್ದು, ಈ ಘಟನೆ ಮುರುಡೇಶ್ವರದಲ್ಲಿ ನಡೆದಿದೆ. ಗೌತಮ್ (17) ಎಂಬ ವಿದ್ಯಾರ್ಥಿ ಮೃತಪಟ್ಟಿದ್ದು,  ಧನುಷ್ ಎಂಬ ವಿದ್ಯಾರ್ಥಿಯನ್ನು ರಕ್ಷಿಸಲಾಗಿದೆ.

ಈಜಲು ಹೋದ ವ್ಯಕ್ತಿ ನೀರುಪಾಲು - nammatumakuru

ಇಬ್ಬರೂ ಬೆಂಗಳೂರಿನ ವಿದ್ಯಾಸೌಧ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದರು. ಈ ವೇಳೆ ಈಜಲು ಸಮುದ್ರಕ್ಕೆ ಇಳಿದಿದ್ದಾಗ ಅಲೆಗಳ ಅಬ್ಬರಕ್ಕೆ ಸಿಲುಕಿದ್ದಾರೆ. ಗೌತಮ್ ಅದಾಗಲೇ ನೀರಿನಲ್ಲಿ ಮುಳುಗಿದ್ದ. ಧನುಷ್ ಜೀವ ಉಳಿಸಿಕೊಳ್ಳಲು ಅಲೆಗಳ ನಡುವೆ ಹೋರಾಡುತ್ತಿದ್ದ. ಇದನ್ನು ಕಂಡ ಲೈಫ್ ಗಾರ್ಡ್ ಹಾಗೂ ಪೊಲೀಸ್ ಸಿಬ್ಬಂದಿಗಳು ಧನುಷ್ ನನ್ನು ರಕ್ಷಿಸಿದ್ದಾರೆ. ಗೌತಮ್ ಎಂಬ ವಿದ್ಯಾರ್ಥಿ ಕೂಡ ಸಮುದ್ರದಲ್ಲಿ ಈಜಲು ಹೋಗಿದ್ದ ಎಂಬುದು ಗೊತ್ತಗಿದೆ. ಸಮುದ್ರದಲ್ಲಿ ಶೋಧ ಕಾರ್ಯಾಚರಣೆ ನಡೆಸಿದಾಗ ಗೌತಮ್ ಶವವಾಗಿ ಪತ್ತೆಯಾಗಿದ್ದಾನೆ. ಈ ಘಟನೆ ಮುರುಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.