ಕರ್ನಾಟಕ

ಸಾರಿಗೆ ಬಸ್ ನಲ್ಲಿ ಏಕಾಏಕಿ ಬೆಂಕಿ : ತಪ್ಪಿದ ಭಾರೀ ಅನಾಹುತ

ಮೈಸೂರಲ್ಲಿ ಸಂಚರಿಸುತ್ತಿದ್ದ ಸಾರಿಗೆ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಮೈಸೂರು : ಮೈಸೂರಲ್ಲಿ ಸಂಚರಿಸುತ್ತಿದ್ದ ಸಾರಿಗೆ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿನ ನಡಾಡಿ ಗ್ರಾಮದಿಂದ ಹೆಚ್.ಡಿ.ಕೋಟೆಗೆ ತೆರಳುತ್ತಿದ್ದ ಸಾರಿಗೆ ಬಸ್ನಲ್ಲಿ ಧಿಡೀರ್‌ನೇ ಬೆಂಕಿ ಕಾಣಿಸಿಕೊಂಡಿದೆ. ಹೆಚ್.ಡಿ.ಕೋಟೆ ಘಟಕಕ್ಕೆ ಸೇರಿದ ಸಾರಿಗೆ ಬಸ್‌ ಇದಾಗಿದ್ದು, ದೇವಲಾಪುರ-ಜಕ್ಕಹಳ್ಳಿ ಮಾರ್ಗ ಮಧ್ಯ ಘಟನೆ ನಡೆದಿದೆ.


ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೊಡ್ಡ ದುರಂತವೊಂದು ತಪ್ಪಿದೆ. ಇನ್ನು ಘಟನಾ ಸ್ಥಳಕ್ಕೆ ದಿಢೀರನೇ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಯು ಬೆಂಕಿ ನಂದಿಸಿದ್ದಾರೆ.