ಹೊಸಬರ ಹೊಸಪ್ರಯತ್ನಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದಾ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ. ಇತ್ತೀಚೆಗೆ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಎಂ ಜಯರಾಮ್ ನಿರ್ದೇಶನದ ಹಾಗೂ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ ಚಿತ್ರ"ಚೇಸರ್"

ಸದ್ಯ ಈ ಚಿತ್ರದ ಟೀಸರ್ ಅನ್ನು ಧ್ರುವ ಸರ್ಜಾ ಅನಾವರಣ ಮಾಡಿದರು. ನಟರಾದ ಅರವಿಂದ್, ತ್ರಿವಿಕ್ರಮ್ ಹಾಗು ಕರಣ್ ,ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. "ಚೇಸರ್" ಚಿತ್ರದ ಟೀಸರ್ ಚೆನ್ನಾಗಿದೆ. ಆಕ್ಷನ್ ಸನ್ನಿವೇಶಗಳಲ್ಲಿ ಸುಮಂತ್ ಶೈಲೇಂದ್ರ ಚೆನ್ನಾಗಿ ಅಭಿನಯಿಸಿದ್ದಾರೆ. ಇಡೀ ತಂಡಕ್ಕೆ ಶುಭವಾಗಲಿ ಎಂದು ಧ್ರುವ ಸರ್ಜಾ ಹಾರೈಸಿದರು.
ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿದೆ. ಸುಮಂತ್ ಶೈಲೇಂದ್ರ ಅವರಿಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ಕಡಿಪುಡಿ ಚಂದ್ರು, ಸಂಗೀತ ಮುಂತಾದವರು "ಚೇಸರ್" ಚಿತ್ರದ ತಾರಾಬಳಗದಲ್ಲಿದ್ದಾರೆ.