ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ "ಬುದ್ದಿವಂತ 2" ಚಿತ್ರದ ಖ್ಯಾತಿಯ ಎಂ ಜಯರಾಮ್ ನಿರ್ದೇಶನದ ಚಿತ್ರ ಚೇಸರ್. "ದಿಲ್ವಾಲ" ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸಿ, ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ "ಚೇಸರ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ.
ಲವ್ ಜಾನರ್ ಜೊತೆಗೆ ಸಸ್ಪೆನ್ಸ್ ವಿತ್ ಆಕ್ಷನ್ ಕಥಾಹಂದರವನ್ನೂ ಹೊಂದಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನವಿದೆ..
ಸುಮಂತ್ ಶೈಲೇಂದ್ರಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ಕಡಿಪುಡಿ ಚಂದ್ರು, ಸಂಗೀತ ಮುಂತಾದವರು "ಚೇಸರ್" ಚಿತ್ರದ ತಾರಾಬಳಗದಲ್ಲಿದ್ದಾರೆ.