ಕ್ರೀಡೆಗಳು
ಬಾರ್ಡರ್-ಗವಾಸ್ಕರ್ ಸರಣಿ ಸೋತ ಟೀಂ ಇಂಡಿಯಾ
ಭಾರತ 2014ರಲ್ಲಿ ಕೊನೆಯ ಬಾರಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಸೋತಿತ್ತು. ಬಾರ್ಡರ್-ಗವಾಸ್ಕರ್ ಸರಣಿ ಸೋಲಿನ ಬೆನ್ನಲ್ಲೇ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಹ್ಯಾಟ್ರಿಕ್ ಫೈನಲ್ ಕನಸನ್ನು ನುಚ್ಚುನೂರು ಮಾಡಿದೆ..
ಸಿಡ್ನಿ ಟೆಸ್ಟ್‌ನಲ್ಲಿ ಆಸೀಸ್ ವಿರುದ್ಧ ಭಾರತ ಹೀನಾಯ ಸೋಲು ಕಂಡಿದೆ. ಬಾರ್ಡರ್-ಗವಾಸ್ಕರ್ ಸರಣಿಯ 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯನ್ನು 3-1 ರಿಂದ ಆಸ್ಟ್ರೇಲಿಯಾ ವಶಪಡಿಸಿಕೊಂಡಿದೆ. ಭಾರತ ಮೊದಲ ಇನಿಂಗ್ಸ್‌ನಲ್ಲಿ 185 ರನ್‌ಗಳಿಗೆ ಆಲೌಟಾಗಿತ್ತು. ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ 181 ರನ್ ಗಳಿಸಿತ್ತು. ಫಸ್ಟ್ ಇನ್ನಿಂಗ್ಸ್‌ನಲ್ಲಿ ಭಾರತ 4 ರನ್‌ಗಳ ಮುನ್ನಡೆ ಸಾಧಿಸಿತ್ತು. ನಂತರ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂದಿಯಾ 157 ರನ್ ಕಲೆ ಹಾಕಿತ್ತು. ಈ ಮೂಲಕ ಆಸ್ಟ್ರೇಲಯಾ ತಂಡಕ್ಕೆ ಭಾರತ 161 ರನ್‌ಗಳ ಗೆಲುವಿನ ಗುರಿ ನೀಡಿತ್ತು. ರನ್ ಚೇಸಿಂಗ್‌ಗೆ ಇಳಿದ ಆಸ್ಟ್ರೇಲಿಯಾ 4 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಗೆಲುವು ಸಾಧಿಸಿತು. 2014ರಲ್ಲಿ ಆಸ್ಟ್ರೇಲಿಯಾ 2 ಪಂದ್ಯ ಗೆದ್ದಿತ್ತು. ಭಾರತ 2014ರಲ್ಲಿ ಕೊನೆಯ ಬಾರಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಸೋತಿತ್ತು. ಬಾರ್ಡರ್-ಗವಾಸ್ಕರ್ ಸರಣಿ ಸೋಲಿನ ಬೆನ್ನಲ್ಲೇ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಹ್ಯಾಟ್ರಿಕ್ ಫೈನಲ್ ಕನಸನ್ನು ನುಚ್ಚುನೂರು ಮಾಡಿದೆ..