ಕ್ರೀಡೆಗಳು
ಆಸೀಸ್ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯದ 3ನೇ ದಿನದಾಟ ಅಂತ್ಯವಾಗಿದೆ..
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯದ 3ನೇ ದಿನದಾಟ ಅಂತ್ಯವಾಗಿದೆ. ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 51ರನ್ ಗಳಿಸಿದ್ದು, ಕೆ.ಎಲ್ ರಾಹುಲ್ ಮತ್ತು ಕ್ಯಾಪ್ಟನ್ ರೋಹಿತ್ ಶರ್ಮಾ ಕ್ರೀಸ್ ಕಾಯ್ದುಕೊಂಡಿದ್ದಾರೆ.. ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಆಸೀಸ್ ಮೊದಲ ಇನ್ನಿಂಗ್ಸ್ ನಲ್ಲಿ 445 ರನ್ ಗಳಿಗೆ ಆಲೌಟ್ ಆಗಿದ್ದು, ಇದಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡ ಕೇವಲ 51 ರನ್‌ಗಳಿಗೆ 4 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.. ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಭಾರತಕ್ಕೆ ಮತ್ತೆ ಮಿಚೆಲ್ ಸ್ಟಾರ್ಕ್ ಆಘಾತ ನೀಡಿದ್ದಾರೆ.. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಕೇವಲ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಗಿಲ್ ಕೂಡ ಬಂದಷ್ಟೇ ವೇಗವಾಗಿ 1 ರನ್ ಗಳಿಸಿ ಮತ್ತೆ ಸ್ಟಾರ್ಕ್ ಬೌಲಿಂಗ್ ನಲ್ಲಿ ಔಟಾದರು.. ನಂತರ ಕೊಹ್ಲಿ ಕೂಡ 3 ರನ್ ಗಳಿಸಿ ಹೇಜಲ್ ವುಡ್‌ಗೆ ವಿಕೆಟ್ ಒಪ್ಪಿಸಿದರೆ, ರಿಷಬ್ ಪಂತ್ ಗಳಿಕೆ ಕೇವಲ 9 ರನ್‌ಗಳಿಗೆ ಸೀಮಿತವಾಯ್ತು..