ಕರ್ನಾಟಕ

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್‌

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯಡಿಯೂರಪ್ಪಗೆ ಹೈಕೋರ್ಟ್‌ ನಿರೀಕ್ಷಣ ಜಾಮೀನು ನೀಡಿದೆ. ಆದರೆ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಇದರಿಂದ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆಯೇ ಹೊರತು ಪ್ರಕರಣದಿಂದ ಮುಕ್ತಿ ಸಿಕ್ಕಿಲ್ಲ.

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದ್ದು, ಹೈಕೋರ್ಟ್‌ ನಿರೀಕ್ಷಣ ಜಾಮೀನು ನೀಡಿದೆ. ಬಿ.ಎಸ್.ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. 

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯಡಿಯೂರಪ್ಪಗೆ ಹೈಕೋರ್ಟ್‌ ನಿರೀಕ್ಷಣ ಜಾಮೀನು ನೀಡಿದೆ. ಆದರೆ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಇದರಿಂದ  ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆಯೇ ಹೊರತು ಪ್ರಕರಣದಿಂದ ಮುಕ್ತಿ ಸಿಕ್ಕಿಲ್ಲ. 

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಗಿದಿದ್ದು, ಇಂದಿಗೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂದು ಧಾರವಾಡ ಹೈಕೋರ್ಟ್ ಪೀಠ ಪ್ರಕರಣ ರದ್ದುಪಡಿಸಲು ನಿರಾಕರಿಸಿದ್ದು, ಕೇವಲ ನಿರೀಕ್ಷಣಾ ಜಾಮೀನು ನೀಡಿದೆ. ಇದರಿಂದಾಗಿ ಯಡಿಯೂರಪ್ಪ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಆದರೆ ಪ್ರಕರಣದ ವಿಚಾರಣೆ ಎದುರಿಸಲೇಬೇಕಾಗಿದೆ.