ನಾಳೆ ಬೆಳಗಾವಿ ಅಧಿವೇಶನ ಮತ್ತೆ ಆರಂಭವಾಗಲಿದ್ದು, ನಾಳೆಯ ಸದನ ಕದನಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ. ನಿನ್ನೆ ಪಂಚಮಸಾಲಿ ಸಮುದಾಯದ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆದಿದ್ದು, ಪೊಲೀಸರ ನಡೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ಜೊತೆಗೆ ವಿಪಕ್ಷಗಳಿಂದ ವಿಧಾನ ಸಭೆ ಹಾಗೂ ಪರಿಷತ್‌ನಲ್ಲಿ ವಿಷಯ ಪ್ರಸ್ತಾಪವಾಗಲಿದೆ.
ಯತ್ನಾಳ್, ಬೆಲ್ಲದ್ ಕೂಡ ಅದೇ ಸಮುದಾಯಕ್ಕೆ ಸೇರಿದವರಾಗಿದ್ದು, ಈ ವಿಚಾರ ಅವರಿಂದಲೇ ಪ್ರಸ್ತಾಪವಾಗುವ ಸಾಧ್ಯತೆ ಇದೆ.ಅಲ್ಲದೇ ನಾಳೆ ಬೆಳಗ್ಗೆ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಸಿಎಂ ಭೇಟಿ ಸಾಧ್ಯತೆ ಇದೆ. ಒಟ್ನಲ್ಲಿ ನಾಳೆ ನಡೆಯಲಿರುವ ಸದನ, ಕದನಕ್ಕೆ ಸಾಕ್ಷಿಯಾಗುವ ಎಲ್ಲಾ ಲಕ್ಷಣ ಕಂಡು ಬರುತ್ತಿದೆ.