ಚಾಮರಾಜನಗರ : ಮೈಕ್ರೋ ಫೈನಾನ್ಸ್ ವಿರುದ್ಧ ಅನ್ನದಾತರು ಸಿಡಿದೆದ್ದಿದ್ದಾರೆ. ಮೈಸೂರು ಭಾಗದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾವು ಹಿನ್ನಲೆ ಚಾಮರಾಜನಗರದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿ ತಡೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ. ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತ್ರತ್ವದಲ್ಲಿ ನಡೆಸಿದ್ದು, ರಾಜ್ಯ, ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಚಾಮರಾಜೇಶ್ವರ ದೇವಲಯದ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಬ್ರೇಕ್ ಹಾಕುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ