ಡಿವೈಡರ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ್ದು, ನಾಲ್ಕು ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ. ಮೃತ ಚಾಲಕನನ್ನು ಮಹಮದ್ ಇಬ್ರಾಹಿಂ ಎನ್ನಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಸ್ಲೀಪರ್ ಕೋಚ್ ಬಸ್, ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಉರುಳಿದೆ. ಕುಣಿಗಲ್ ಠಾಣಾ ಪೊಲೀಸರು ಬೆಳ್ಳಂಬೆಳಗ್ಗೆಯೇ ಸ್ಥಳಕ್ಕೆ ದೌಡಾಯಿಸಿದ್ದಾರೆ.