ಹೈಕಮಾಂಡ್ ಎಚ್ಚರಿಕೆಯ ನಡುವೆಯು ಕಾಂಗ್ರೆಸ್‌ನಲ್ಲಿ ಮತ್ತೆ ಸಿಎಂ ಕುರ್ಚಿ ಬಗ್ಗೆ ಚರ್ಚೆ ಶುರುವಾಗಿದೆ. ಹೈಕಮಾಂಡ್ ಎಲ್ಲವನ್ನ ನೋಡಿಕೊಳ್ಳುತ್ತೆ, ಎಲ್ಲರು ಬಾಯಿ ಮುಚ್ಚಿಕೊಂಡು ಸುಮ್ಮನಿರಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆಯ ನಡುವೆಯೂ ಕೈ ಪಾಳಯದಲ್ಲಿ ಮುಖ್ಯಮಂತ್ರಿ ಗದ್ದುಗೆ ಚರ್ಚೆ ನಿಲ್ಲುತ್ತಿಲ್ಲ.
ಖರ್ಗೆ ಖಡಕ್ ಎಚ್ಚರಿಕೆಯ ನಡುವೆಯು ಮತ್ತೆ ಸಿಎಂ ಚರ್ಚೆ ಮುನ್ನೆಲೆಗೆ ಬಂದಿದ್ದು, ಸಿದ್ದರಾಮಯ್ಯರೇ ಐದು ವರ್ಷ ಸಿಎಂ ಆಗಿರ್ತಾರೆ ಎಂದು ಯತೀಂದ್ರ ಬಹಿರಂಗ ಹೇಳಿಕೆ ನೀಡಿದ್ದಾರೆ. ಯತೀಂದ್ರ ಹೇಳಿಕೆ ಬೆನ್ನಲ್ಲೇ ಡಿಕೆಶಿ ಪರ ಮಾಗಡಿ ಶಾಸಕ ಬಾಲಕೃಷ್ಣ ಬ್ಯಾಟ್ ಬೀಸಿದ್ದು, ಚನ್ನಪಟ್ಟಣದ ಕಾರ್ಯಕ್ರಮದಲ್ಲಿ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲು ಡಿಕೆಶಿ ಸಿದ್ಧರಾಗಿದ್ದಾರೆ ಎಂದು ಪರೋಕ್ಷವಾಗಿ ನುಡಿದಿದ್ದಾರೆ. ಈ ಮೂಲಕ ಶಾಸಕ ಮಾಗಡಿ ಬಾಲಕೃಷ್ಣ ಸಿಎಂ ಬದಲಾವಣೆ ಬಗ್ಗೆ ಮುನ್ಸೂಚನೆ ನೀಡಿದ್ದಾರೆ.