ಕರ್ನಾಟಕ

ಸಿಲಿಂಡರ್‌ ಸ್ಫೋಟದಿಂದ ಅಯ್ಯಪ್ಪ ಮಾಲಾಧಾರಿಗಳ ಸ್ಥಿತಿ ಗಂಭೀರ

ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳ ನಿದ್ರಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಡುಗೆ ಮಾಡಲು ತಂದಿರಿಸಿದ್ದ ಸಿಲಿಂಡರ್‌ನಲ್ಲಿ ಸೋರಿಕೆಯಾಗಿದ್ದರಿಂದ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ..

ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಸಾಯಿನಗರದ ದೇವಸ್ಥಾನವೊಂದರಲ್ಲಿ ಸಂಭವಿಸಿದೆ.. ಘಟನೆಯಲ್ಲಿ ಗಾಯಗೊಂಡಿರುವ 9 ಮಾಲಾಧಾರಿಗಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಗಳುಗಳ ಆರೋಗ್ಯ ವಿಚಾರಿಸಿದ್ದಾರೆ. ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳ ನಿದ್ರಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಡುಗೆ ಮಾಡಲು ತಂದಿರಿಸಿದ್ದ ಸಿಲಿಂಡರ್‌ನಲ್ಲಿ ಸೋರಿಕೆಯಾಗಿದ್ದರಿಂದ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ..