ವೈರಲ್

ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ..30 ಜನರಿಗೆ ಗಾಯ..!

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ ಹೊಡೆದಿರುವ ಘಟನೆ, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ ಹೊಡೆದಿರುವ ಘಟನೆ, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ನಡೆದಿದೆ. ಇದರಿಂದ ಸುಮಾರು 30 ಜನರಿಗೆ ಗಂಭೀರ ಗಾಯಗಳಾಗಿವೆ. ಕೊಳ್ಳೆಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಹತ್ತಿ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಮದ್ದೂರು ಸಾರ್ವಜನಿಕರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಕಾರ್ಯಕ್ರಮ ನಿಮಿತ್ತ ಮದ್ದೂರಿಗೆ ಆಗಮಿಸಿದ್ದ ಸಚಿವ ಎನ್.ಚಲುವರಾಯಸ್ವಾಮಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.