ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕರಿಘಟ್ಟ ಅರಣ್ಯ ಪ್ರದೇಶದಲ್ಲಿ, ಕಿಡಿಗೇಡಿಗಳ್ಯಾರೋ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಈ ಪರಿಣಾಮ ಅರಣ್ಯ ಪ್ರದೇಶದಲ್ಲಿ ಇದ್ದ ಮರಗಳು ಬೆಂಕಿಗೆ ಆಹುತಿಯಾಗಿದ್ದು, ಸಂಪೂರ್ಣ ಅರಣ್ಯವೇ ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿದೆ. 6 ದಿನಗಳ ಹಿಂದೆ ಕರಿಘಟ್ಟಕ್ಕೆ ಹೊಂದಿಕೊಂಡಂತೆ ಇರುವ ಕೆ. ಶೆಟ್ಟಿಹಳ್ಳಿ ಮೀಸಲು ಅರಣ್ಯದಲ್ಲೂ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಬೆಂಕಿನಂದಿಸುವ ಕಾರ್ಯ ನಡೆದಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.