ಬೆಂಗಳೂರು : ಸರ್ಕಾರದ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ಪಡೆದವರಿಗೆ ಕಿರುಕುಳ ಹಾಗೂ ಆತ್ಮಹತ್ಯೆ ಪ್ರಕರಣಗಳು ದಾಖಲು ಹೆಚ್ಚಾದ ಹಿನ್ನೆಲೆ, ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿತ್ತು. ಆದರೆ ಇದೀಗ ಹಲವು ಸ್ಪಷ್ಟನೆ ಕೇಳಿ ರಾಜ್ಯಪಾಲರು ಸುಗ್ರೀವಾಜ್ಞೆಯನ್ನ ವಾಪಸ್ ಕಳಿಸಿದ್ದಾರೆ.
ಸರ್ಕಾರದಿಂದ ಹಲವು ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆ ವಾಪಸ್ ಕಳಿಸಿದ ಗವರ್ನರ್..!?
- ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಿದೆ.
- ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸ್ತಿಲ್ಲ.
- ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ.
- ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ.
- ನೀವು ಐದು ಲಕ್ಷ ದಂಡ ಹೇಗೆ ಒದಗಿಸುತ್ತೀರಾ..? ಎಂದು ಪ್ರಶ್ನೆ ಮಾಡಿರುವ ರಾಜ್ಯಪಾಲರು.
- ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರ..
- ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು.
- ಶಿಕ್ಷೆ ಪ್ರಮಾಣ ಹತ್ತು ವರ್ಷ ವಿಧಿಸಲಾಗಿದೆ. ಇದರಲ್ಲಿ ಯಾವುದೇ ಲಾಜಿಕ್ ಇಲ್ಲ.
- ಪ್ರಾಮಾಣಿಕವಾಗಿ ಸಾಲ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ.
- ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ.
- ಬಜೆಟ್ ಅಧಿವೇಶನದ ಹತ್ತಿರವಾಗ್ತಿರುವಾಗ ಸದನದಲ್ಲಿ ಸಾಧಕಬಾಧಕ ಚರ್ಚಿಸಿ.
- ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮಕೈಗೊಳ್ತಿಲ್ಲ.
- ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರೋದಕ್ಕೆ ಮತ್ತೊಂದು ಕಾನೂನಿನ ಅಗತ್ಯತೆ ಕಾಣ್ತಿಲ್ಲ ಎಂದು ಸುಗ್ರೀವಾಜ್ಞೆ ವಾಪಸ್ ಕಳಿಸಿದ ರಾಜ್ಯಪಾಲರು.