ಕರ್ನಾಟಕ
ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಮೀಸಲಾತಿ ಹೋರಾಟ
ಮೀಸಲಾತಿ ಸಂಬಂಧ ಅಧಿವೇಶನ ವೇಳೆ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ.
ಮೀಸಲಾತಿ ಸಂಬಂಧ ಅಧಿವೇಶನ ವೇಳೆ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ.. ಪ್ರತಿಭಟನಾಕಾರರ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.. ಸುವರ್ಣಸೌಧ ಮುತ್ತಿಗೆ ಯತ್ನದ ವೇಳೆ ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆಯಲಾಗಿದೆ.. ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಹೈಡ್ರಾಮಾವೇ ನಡೆದಿದೆ.. ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಜಟಾಪಟಿ ನಡೆದಿದ್ದು, ಸುವರ್ಣಸೌಧ ಮುತ್ತಿಗೆಗೆ ಸಾವಿರಾರು ಮಂದಿ ಯತ್ನಿಸಿದ್ದಾರೆ.. ಈ ವೇಳೆ ನಡೆದ ಲಾಠಿಚಾರ್ಜ್‌ನಲ್ಲಿ ಪ್ರತಿಭಟನಾಕಾರರಿಗೆ ಗಾಯಗಳಾಗಿವೆ.. ಕಲ್ಲು ತೂರಾಟದ ವೇಳೆ ಪೊಲೀಸರ ವಾಹನಕ್ಕೂ ಹಾನಿಯಾಗಿದೆ.. ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ..