ಕರ್ನಾಟಕ

ಅದ್ದೂರಿಯಾಗಿ ನೆರವೇರಿತು "ರಾಜು ಜೇಮ್ಸ್ ಬಾಂಡ್" ಚಿತ್ರದ ಪ್ರೀ ರಿಲೀಸ್ ಇವೆಂಟ್

ಟ್ರೇಲರ್ ಹಾಗೂ ಹಾಡುಗಳು ತುಂಬಾ ಚೆನ್ನಾಗಿದೆ. ಅಷ್ಟೇ ಚೆನ್ನಾಗಿ ನಾಯಕ ಹಾಗೂ ನಾಯಕಿ ಅಭಿನಯಿಸಿದ್ದಾರೆ. ಈ ಚಿತ್ರ ಭರ್ಜರಿ ಯಶಸ್ಸು ‌ಕಾಣಲಿ ಎಂದು ರಮ್ಯ ಹಾರೈಸಿದರು. ನಾಯಕ ಗುರುನಂದನ್ ಹಾಗೂ ನಾಯಕಿಯಾಗಿ ಮೃದುಲ, ಚಿಕ್ಕಣ್ಣ, ತಬಲ ನಾಣಿ, ಸಾಧು ಕೋಕಿಲ, ಅಚ್ಯುತ್ ಕುಮಾರ್, ರವಿಶಂಕರ್, ಜೈ ಜಗದೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ " ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. 

ಗೃಹ ಸಚಿವರಾದ ಜಿ.ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯ‌ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.  ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ನಾಯಕಿ ತಪಸ್ವಿನಿ ಶರ್ಮ ಸೇರಿದಂತೆ ಅನೇಕ ಗಣ್ಯರು ಚಿತ್ರತಂಡಕ್ಕೆ ಹಾರೈಸಿದರು."ರಾಜು ಜೇಮ್ಸ್ ಬಾಂಡ್" ಚಿತ್ರದ ತುಣುಕು ಹಾಗೂ ಹಾಡುಗಳನ್ನು ನೋಡಿದರೆ, ಚಿತ್ರ ಯಶಸ್ವಿಯಾಗುವ ಎಲ್ಲಾ ಲಕ್ಷಣಗಳು ಇದೆ. ಚಿತ್ರ ಯಶಸ್ಸು ಕಾಣಲಿ ಎಂದು ಗೃಹ ಸಚಿವರು ಶುಭ ಕೋರಿದರು.

ಟ್ರೇಲರ್ ಹಾಗೂ ಹಾಡುಗಳು ತುಂಬಾ ಚೆನ್ನಾಗಿದೆ. ಅಷ್ಟೇ ಚೆನ್ನಾಗಿ ನಾಯಕ ಹಾಗೂ ನಾಯಕಿ ಅಭಿನಯಿಸಿದ್ದಾರೆ. ಈ ಚಿತ್ರ ಭರ್ಜರಿ ಯಶಸ್ಸು ‌ಕಾಣಲಿ ಎಂದು ರಮ್ಯ ಹಾರೈಸಿದರು. ನಾಯಕ ಗುರುನಂದನ್ ಹಾಗೂ ನಾಯಕಿಯಾಗಿ ಮೃದುಲ,  ಚಿಕ್ಕಣ್ಣ, ತಬಲ ನಾಣಿ, ಸಾಧು ಕೋಕಿಲ, ಅಚ್ಯುತ್ ಕುಮಾರ್, ರವಿಶಂಕರ್, ಜೈ ಜಗದೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ