ಮೈಸೂರು : ಕೊಡಗಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿದೆ. ಹುಲಿ ಸೆರೆಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಜಾನುವಾರುಗಳ ಮೇಲೆ ದಾಳಿ ಮಾಡಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ಮುಂದುವರೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ, ಆನೆ ಚೌಕೂರು ಸೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಚರಣೆ ನಡೆದಿದೆ.
ಸಾಕಾನೆಗಳಾದ ಅಭಿಮನ್ಯು, ಅಶೋಕ ಆನೆಗಳೊಂದಿಗೆ ಅರಣ್ಯ ಇಲಾಖೆಯ 25 ಕ್ಕೂ ಹೆಚ್ಚು ಸಿಬ್ಬಂದಿ ಮೂರು ದಿನಗಳಿಂದ ಹುಲಿಗಾಗಿ ಹುಡುಕಾಟ ನಡೆಸಿದ್ದು, ಹುಲಿ ಹೆಜ್ಜೆ ಗುರುತುಗಳ ಮೂಲಕ ಹುಲಿ ಪತ್ತೆಗೆ ಹುಡುಕಾಟ ನಡೆಸಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಏಳು ಜಾನುವಾರಗಳ ಮೇಲೆ ಹುಲಿ ದಾಳಿ ಮಾಡಿದೆ. ಹುಲಿ ಪತ್ತೆಗಾಗಿ ಅರಣ್ಯ ಇಲಾಖೆ ಅಳವಡಿಸಿದ್ದ ಕ್ಯಾಮೆರಾದಲ್ಲಿ 61ಯು ಹೆಸರಿನ ಹುಲಿ ಚಿತ್ರಣ ಸೆರೆಯಾಗಿದೆ.
ಬಾಳೆಲೆ, ಆನೆಚೌಕೂರು ಸೇರಿ ಸುತ್ತಮುತ್ತಲಿನ 15 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಶೋಧ ನಡೆಸಿದ್ದಾರೆ. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಸೇರಿ ಆರ್ ಎಫ್ ಓ ದೇವರಾಜು ನೇತೃತ್ವದ ತಂಡ ಹುಲಿಗಾಗಿ ಕೂಂಬಿಂಗ್ ಕಾರ್ಯಚರಣೆ ನಡೆದಿದೆ.