ಕ್ರೀಡೆಗಳು

INDIA VS NEWZEALAND: ಮೊದಲ ದಿನದ ಆಟದಲ್ಲಿ ಸ್ಪಿನ್ನರ್​​​​​​​ಗಳ ಮೋಡಿ ಕಿವೀಸ್​ 259ಕ್ಕೆ ಆಲೌಟ್​​

ಪುಣೆ:‌ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್‌ ವಿರುದ್ಧದ 2ನೇ ಟೆಸ್ಟ್‌ ಪಂದ್ಯದ ಮೊದಲ ದಿನದಾಟದಲ್ಲಿ ಭಾರತೀಯ ಸ್ಪಿನ್ನರ್‌ಗಳಾದ ವಾಷಿಂಗ್ಟನ್‌ ಸುಂದರ್‌ ಹಾಗೂ ರವಿಚಂದ್ರನ್‌ ಅಶ್ವಿನ್‌ ಭರ್ಜರಿ ಆಟವನ್ನ ಪ್ರದರ್ಶನ ಮಾಡಿದ್ದಾರೆ.

45 ತಿಂಗಳ ಬಳಿಕ ಟೆಸ್ಟ್‌ ಕ್ರಿಕೆಟ್‌ ಅಖಾಡಕ್ಕಿಳಿದ ವಾಷಿಂಗ್ಟನ್‌ ಸುಂದರ್‌ 23.1 ಓವರ್‌ಗಳಲ್ಲಿ 59 ರನ್‌ ಬಿಟ್ಟುಕೊಟ್ಟು ಪ್ರಮುಖ 7 ವಿಕೆಟ್‌ ಕಬಳಿಸುವ ಮೂಲಕ ಕಿವೀಸ್‌ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಲು ಸಹಕಾರಿಯಾಗಿದ್ದಾರೆ. ಇದರೊಂದಿಗೆ ಸ್ಪಿನ್‌ ಮಾಂತ್ರಿಕ ಆರ್‌. ಅಶ್ವಿನ್‌ 3 ವಿಕೆಟ್‌ ಪಡೆದಿದ್ದಾರೆ, ಮೊದಲ ದಿನದಾಟದಲ್ಲಿ ಸ್ಪಿನ್ನರ್‌ಗಳೇ ಮೇಲುಗೈ ಸಾಧಿಸಿದ್ದಾರೆ.

ಭಾರತದ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್‌ ಪಂದ್ಯದಲ್ಲಿ ಮೊದಲ ದಿನವೇ ಕಿವೀಸ್‌ 79.1 ಓವರ್‌ಗಳಲ್ಲಿ 259 ರನ್‌ಗಳಿಗೆ ಆಲೌಟ್‌ ಆಗಿದೆ. ಬಳಿಕ ತನ್ನ ಸರದಿಯ ಮೊದಲ ಇನ್ನಿಂಗ್ಸ್‌ ಆರಂಭಿಸಿರುವ ಟೀಂ ಇಂಡಿಯಾ 11 ಓವರ್‌ಗಳಲ್ಲಿ 16 ರನ್‌ ಗಳಿಸಿ ಒಂದು ವಿಕೆಟ್‌ ಕಳೆದುಕೊಂಡಿದೆ. ಕ್ಯಾಪ್ಟನ್ ರೋಹಿತ್‌ ಶರ್ಮಾ ಡಕೌಟ್‌ ಆಗಿ ಪೆವಿಲಿಯನ್‌ಗೆ ಮರಳಿದ್ದಾರೆ. ಇನ್ನೂ ಯಶಸ್ವಿ ಜೈಸ್ವಾಲ್‌ (6 ರನ್‌), ಶುಭಮನ್‌ ಗಿಲ್‌ (10 ರನ್‌) ಗಳಿಸಿ ಕ್ರೀಸ್‌ನಲ್ಲಿದ್ದು, ಶುಕ್ರವಾರ 2ನೇ ದಿನದ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ.