ಕರ್ನಾಟಕ

ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್..ಇನ್ಮುಂದೆ ಬಳ್ಳಾರಿಗೆ ಹೋಗಲು ಮುಕ್ತ ಅವಕಾಶ..!

ಬಳ್ಳಾರಿ, ಕಡಪ, ಅನಂತಪುರಕ್ಕೆ ಪ್ರವೇಶ ಮಾಡುವಂತಿಲ್ಲ ಎಂದು, ಷರತ್ತು ವಿಧಿಸಲಾಗಿತ್ತು. ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ಹೊರಬಿದ್ದಿದೆ.

ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇನ್ನುಮುಂದೆ ಯಾವುದೇ ಪೂರ್ವಾನುಮತಿ ಇಲ್ಲದೇ ಬಳ್ಳಾರಿಗೆ ತೆರಳಬಹುದು. ಸುಪ್ರೀಂ ಕೋರ್ಟ್ ಅನುಮತಿ ನೀಡಿ ಇಂದು (ಸೋಮವಾರ) ಆದೇಶ ಹೊರಡಿಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಜನಾರ್ದನ ರೆಡ್ಡಿ ಅವರಿಗೆ, 2015ರಲ್ಲಿ ಜಾಮೀನು ನೀಡುವ ವೇಳೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿತ್ತು. ಅದೇನಂದ್ರೆ ಬಳ್ಳಾರಿ, ಕಡಪ, ಅನಂತಪುರಕ್ಕೆ ಪೂರ್ವಾನುಮತಿ ಇಲ್ಲದೇ ಪ್ರವೇಶ ಮಾಡುವಂತಿಲ್ಲ ಎಂದು, ಷರತ್ತು ವಿಧಿಸಲಾಗಿತ್ತು. ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ಹೊರಬಿದ್ದಿದೆ.