ದೇಶ
ಕಬ್ಬಿಣದ ರಾಡ್ ತುಂಬಿದ್ದ ಟ್ರಕ್‌ಗೆ ಟೆಂಪೋ ಡಿಕ್ಕಿ.. 8 ಮಂದಿ ಬಲಿ
ಕಬ್ಬಿಣದ ರಾಡ್ಗಳನ್ನು ಸಾಗಿಸುತ್ತಿದ್ದ ಲಾರಿಗೆ ಟೆಂಪೋ ಡಿಕ್ಕಿಯಾಗಿ 8 ಮಂದಿ ಮೃತಪಟ್ಟಿದ್ದು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ..
ಕಬ್ಬಿಣದ ರಾಡ್ಗಳನ್ನು ಸಾಗಿಸುತ್ತಿದ್ದ ಲಾರಿಗೆ ಟೆಂಪೋ ಡಿಕ್ಕಿಯಾಗಿ 8 ಮಂದಿ ಮೃತಪಟ್ಟಿದ್ದು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.. ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಜನರು ಉಸಿರುಚೆಲ್ಲಿದ್ದಾರೆ.. ನಾಸಿಕ್ ಜಿಲ್ಲೆಯ ಅಯ್ಯಪ್ಪ ದೇವಸ್ಥಾನದ ಬಳಿ ದ್ವಾರಕಾ ವೃತ್ತದ ಬಳಿ ದುರಂತ ಸಂಭವಿಸಿದೆ.. ಟೆಂಪೋದಲ್ಲಿದ್ದ 16 ಮಂದಿ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿ ವಾಪಸ್ ಆಗುತ್ತಿದ್ದರು ಎನ್ನಲಾಗಿದೆ.. ಅಯ್ಯಪ್ಪ ದೇಗುಲ ಬಳಿ ಟೆಂಪೋ ನಿಯಂತ್ರಣ ಚಾಲಕನ ನಿಯಂತ್ರಣ ತಪ್ಪಿದ್ದು, ಕಬ್ಬಿಣದ ರಾಡ್ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಅಪ್ಪಳಿಸಿದ ಹಿನ್ನೆಲೆ ಸ್ಥಳದಲ್ಲಿಯೇ 8 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಅಪಘಾತದಲ್ಲಿ ಗಾಯಗೊಂಡಿದ್ದವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಅಪಘಾತ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿದ್ದಾರೆ..