ಕರ್ನಾಟಕ

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ.. ಬಿ.ವೈ. ವಿಜಯೇಂದ್ರ ಆಕ್ರೋಶ

ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ..

ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೊನ್ನೆ ನಡೆದ ಘಟನೆ ಇಡೀ ದೇಶದಾದ್ಯಂತ ಇರುವ ಹಿಂದೂಗಳಿಗೆ ಆಘಾತವನ್ನುಂಟು ಮಾಡಿದೆ ಎಂದಿದ್ದಾರೆ.. ಈ ರೀತಿಯ ದುರಂತ ಕರ್ನಾಟಕದಲ್ಲಿ ಹಿಂದೆಂದೂ ಸಂಭವಿಸಿಲ್ಲ.. ನಾವು ಬಡ ಕುಟುಂಬ ಭೇಟಿ ನೀಡಿದ್ದೇವೆ ಮತ್ತು ನಿನ್ನೆ ನಾವು ಹಸುವನ್ನು ಸಹ ದಾನ ಮಾಡಿದ್ದೇವೆ.. ಅತ್ಯಂತ ದುರದೃಷ್ಟಕರ ಎಂದರೆ ಕರ್ನಾಟಕದಲ್ಲಿ ಆಡಳಿತ ಪಕ್ಷದ ತುಷ್ಟೀಕರಣ ರಾಜಕೀಯ ಹೀಗೆಲ್ಲಾ ಆಗ್ತಿದೆ ಎಂದು ಆರೋಪಿಸಿದ್ದಾರೆ.. ಬಡ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ನಾವು ಒತ್ತಾಯಿಸುತ್ತೇವೆ.. ಈ ಘಟನೆಯ ಹಿಂದಿರುವ ವ್ಯಕ್ತಿಗಳನ್ನು ಗುರುತಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ..