ವಿದೇಶ
WHOನಿಂದ ಹೊರಬಂದ ಅಮೆರಿಕ.. ಮಹತ್ವದ ಮಸೂದೆಗೆ ಟ್ರಂಪ್ ಸಹಿ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಶಾಕಿಂಗ್ ನಿರ್ಧಾರಗಳನ್ನ ಕೈಗೊಂಡಿದ್ದಾರೆ.
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಶಾಕಿಂಗ್ ನಿರ್ಧಾರಗಳನ್ನ ಕೈಗೊಂಡಿದ್ದಾರೆ..ಪ್ಯಾರಿಸ್ ಹವಾಮಾನ ಒಪ್ಪಂದ, ವಿಶ್ವ ಆರೋಗ್ಯ ಸಂಸ್ಥೆಗೆ ಸಂಬಂಧಿಸಿದ ವಿಚಾರಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಟ್ರಂಪ್ ನಿರ್ಧಾರ ತೆಗೆದುಕೊಂಡಿದ್ದು ಎಲ್ಲಾ ಆದೇಶಗಳಿಗೆ ಸಹಿ ಹಾಕಿದ್ದಾರೆ.. ಅದರಲ್ಲಿಯೂ ಬಹುಮುಖ್ಯವಾಗಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಂಕಿತ ಬಿದ್ದಿದೆ.. ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಇತರೆ ಅಂತಾರಾಷ್ಟ್ರೀಯ ಆರೋಗ್ಯ ಬಿಕ್ಕಟ್ಟುಗಳನ್ನು ನಿರ್ವಹಿಸುವಲ್ಲಿ WHO ವಿಫಲವಾಗಿದೆ ಎಂದು ಟ್ರಂಪ್ ಆರೋಪಿಸಿದ್ದರು.. ಇದೀಗ ಅಧ್ಯಕ್ಷರಾಗಿ ಪದಗ್ರಹ ಬೆನ್ನಲ್ಲೇ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ..