ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ಸಿಟಿ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು. ಇತರೆ ವಿಧಾನ ಪರಿಷತ್ ಸದಸ್ಯರು ರವಿ ಆ ಪದ ಬಳಸಿರುವುದನ್ನು ಕೇಳಿಸಿಕೊಂಡಿದ್ದಾರೆ. ರವಿ ಕೂಡ ತಾವು ಅತ್ಯಂತ ತುಚ್ಚವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ಕಿಡಿಕಾರಿದರು.