ಕರ್ನಾಟಕ
ದೇವಸ್ಥಾನಕ್ಕೆ ನುಗ್ಗಿ ಲಕ್ಷಾಂತರ ರೂ. ಕಳ್ಳತನ..!
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ, ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ಖತರ್ನಾಕ್ ಕಳ್ಳರು ಹುಂಡಿ ಕದ್ದೊಯ್ದಿದ್ದಾರೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ, ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ಖತರ್ನಾಕ್ ಕಳ್ಳರು ಹುಂಡಿ ಕದ್ದೊಯ್ದಿದ್ದಾರೆ. ಗ್ರಾಮದ ಹೊರ ವಲಯದಲ್ಲಿರುವ ದೇವಸ್ಥಾನದ ಬೀಗು ಮುರಿದು ಒಳಗೆ ನುಗ್ಗಿ, ಸುಮಾರು 1 ಲಕ್ಷಕ್ಕೂ ಹೆಚ್ಚು ಹಣವನ್ನು ಕದ್ದೊಯ್ದಿದ್ದಾರೆ. ಸತತವಾಗಿ 3 ಬಾರಿ ದೇವಸ್ಥಾನಕ್ಕೆ ನುಗ್ಗಿ ಕಳ್ಳತನ ಮಾಡಿದ್ದಾರೆ. ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಳ್ಳರನ್ನು ಹುಡುಕುವಂತೆ ಗ್ರಾಮಸ್ಥರ ಆಗ್ರಹ ಕೇಳಿ ಬಂದಿದೆ.