ತುಮಕೂರು: ಮನೆಯ ಬೀಗ ಒಡೆದು ಚಿನ್ನಾಭರಣ, ಹಣ ದೋಚಿ ಖದೀಮರು ಪರಾರಿಯಾಗಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ಪಟ್ಟಣದ ಶ್ರೀನಿವಾಸ ನಗರದಲ್ಲಿ ಘಟನೆ ನಡೆದಿದೆ. ವಿಶ್ವಮೋಹನ್ ಗುಪ್ತಾ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಕುಟುಂಬ ಸಮೇತ ಕಳೆದ ಎರಡು ದಿನಗಳ ಹಿಂದೆ ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿನ ಸಂಬಂಧಿಕರ ಮನೆಗೆ ವಿಶ್ವ ಮೋಹನ್ ಗುಪ್ತಾ ತಮ್ಮ ಕುಟುಂಬಸ್ಥರೊಂದಿಗೆ ತೆರಳಿದ್ರು. ಮನೆಗೆ ಬೀಗ ಹಾಕಿರೋದನ್ನ ಗಮನಿಸಿದ ಖದೀಮರು ಪಕ್ಕಾ ಸ್ಕೇಚ್ ಹಾಕೇ ಕಳ್ಳತನ ಮಾಡಿದ್ದಾರೆ. ಮನೆಯ ಬೀಗ ಒಡೆದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ, ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ. ನಿನ್ನೆ ಸಂಜೆ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಬಳಿಕ ಮನೆ ಮಾಲೀಕನಿಂದ ಪಾವಗಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಘಟನೆ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದಕೊಂಡಿದ್ದಾರೆ.