ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ತಹಸಿಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಕ್ಕಣ್ಣ ಗೌಡರ್(56) ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕೆಲಸದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಜಕ್ಕಣ್ಣ ಗೌಡರ್, ಖಾಸಗಿ ಹೋಟೆಲ್ನಲ್ಲಿ ರೂಮ್ ಮಾಡಿ ಉಳಿದುಕೊಂಡಿದ್ದರು, ಆದರೆ ಹೋಟೆಲ್ನಲ್ಲೆ ಹೃದಯಾಘಾತದಿಂದ ತಹಸಿಲ್ದಾರ್ ಜಕ್ಕಣ್ಣ ಗೌಡರ್ ನಿಧನರಾಗಿದ್ದಾರೆ.
ಮೃತ ಜಕ್ಕಣ್ಣ ಗೌಡರ್ ಅವರು ತೀರ್ಥಹಳ್ಳಿಯ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕಾರ್ಯನಿಮತ್ತ ಜಕ್ಕಣ್ಣ ಗೌಡರ್ ನ್ಯಾಯಾಲಯದ ಕೆಲಸಕ್ಕೆ ಬೆಂಗಳೂರಿಗೆ ತೆರಳಿದ್ದರು. ಹೋಟೆಲ್ನಲ್ಲಿ ರೂಮ್ ಮಾಡಿ ಉಳಿದಿದ್ದರು. ಆದ್ರೆ ಹೃದಯಘಾತದಿಂದ ಜಕ್ಕಣ್ಣ ಗೌಡರ್ ನಿಧನರಾಗಿದ್ದಾರೆ.
ಬೆಳಿಗ್ಗೆಯಿಂದ ಕುಟುಂಬಸ್ಥರು ಇವರನ್ನ ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬರದ ಕಾರಣ, ಕುಟುಂಬದವರು ತೀರ್ಥಹಳ್ಳಿ ಪೊಲೀಸ್ ಠಾಣೆಗೆ ತಿಳಿಸಿದ್ದರು. ತೀರ್ಥಹಳ್ಳಿ ಪೊಲೀಸರು ಬೆಂಗಳೂರು ಪೊಲೀಸರ ಜತೆ ಸಂಪರ್ಕ ಸಾಧಿಸಿದ್ದರು.
ನಂತರ ಉಪ್ಪಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ರಾತ್ರಿ ಎಂಟು ಗಂಟೆಯ ಸುಮಾರಿಗೆ ರೂಮ್ ಬಾಗಿಲು ಓಪನ್ ಮಾಡಲಾಗಿದ್ದು ಈ ವೇಳೆ ಜಕ್ಕಣ್ಣ ಗೌಡರ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿರುದಾಗಿ ಬೆಳಕಿಗೆ ಬಂದಿದೆ. ಇದುವರೆಗೆ ಘಟನೆಯ ನಿಖರ ಸಮಯ ತಿಳಿದು ಬಂದಿಲ್ಲ. ಸದ್ಯ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗುತ್ತದೆ. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.