ಮೈಸೂರು : ಚನ್ನಪಟ್ಟಣ ಚುನಾವಣೆಯ ಪ್ರಚಾರ ಬಿರುಸುನಿಂದ ಸಾಗಿದೆ. ತಾಯಿಯ ಆಶೀರ್ವಾದದಿಂದ ಈ ಬಾರಿ ಎನ್ ಡಿಎ ಅಭ್ಯರ್ಥಿ ಗೆಲುವಿಗೆ ಯಾವುದೇ ಸಮಸ್ಯೆ ಇಲ್ಲ. ಚಾಮುಂಡಿ ಬೆಟ್ಟದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಈ ಬಾರಿ ಚಕ್ರವ್ಯೂಹ ರಚಿಸಲು ಆರಂಭದಲ್ಲಿ ಪ್ರಯತ್ನ ಮಾಡಿದ್ರು. ಆದರೆ ಅದು ಸಾಧ್ಯವಾಗಲಿಲ್ಲ. ಪಕ್ಷದ ಹಿತ ದೃಷ್ಟಿಯಿಂದ ಈ ಬಾರಿ ನಿಖಿಲ್ ಸ್ಪರ್ಧೆ ಅನಿರ್ವಾಯವಾಯಿತು ಎಂದರು.

ಪಕ್ಷದ ಚಟುಚಟಿಕೆಯಿಂದ ಜಿ.ಟಿ ದೇವೇಗೌಡ ದೂರ ಉಳಿದಿರುವ ವಿಚಾರಕ್ಕೆ ಸಂಬಂಧೀಸಿದಂತೆ ಮಾತನಾಡಿದ ಅವರು ಜಿ.ಟಿ ದೇವೇಗೌಡರಿಗೆ ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳಿದೆ. ಹೀಗಾಗಿ ಅವರು ಉಪಚುನಾವಣೆಯಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಜಿ.ಟಿ ದೇವೇಗೌಡರು ಸಹ ನಿಖಿಲ್ ಗೆಲುವಿಗೆ ಶ್ರಮಿಸುತ್ತಾರೆ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.