ಮುದ್ದೇಬಿಹಾಳ : ದೇವಸ್ಥಾನಕ್ಕೆ ಹೋಗಿ ಬರುವಾಗ ಕಾರ್ ಒಂದು ರಸ್ತೆಯಲ್ಲಿ ನಿಂತಿದ್ದ ಕ್ಯಾಂಟರಿಗೆ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಮುದ್ದೇಬಿಹಾಳ ತಾಲೂಕು ಬಿದರಕುಂದಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಗುತ್ತಿಗೆದಾರ ಲಕ್ಷ್ಮಣ ವಡ್ಡರ, ಬೈಲಪ್ಪ ಬಿರಾದಾರ, ಮುದ್ದೇಬಿಹಾಳದ ರಾಮಣ್ಣ ನಾಯಕ ಮಕ್ಕಳು ಮತ್ತು ಕಾರು ಚಾಲಕ ಗುಡ್ನಾಳದ ಮಹ್ಮದರಫೀಕ ಎಂದು ಗುರುತಿಸಲಾಗಿದೆ. ಈ ಘಟನೆ ಬಾಗಲಕೋಟ ಜಿಲ್ಲೆ ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ದೇವಸ್ಥಾನಕ್ಕೆ ಹೋಗಿ ಬರುವಾಗ ಈ ದುರಂತ ಸಂಭವಿಸಿದೆ.