ಬೆಳಗಾವಿಯ ಚೆನ್ನಮ್ಮ ವೃತ್ತದ ಬಳಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಮೂವರಿಗೆ ಚಾಕು ಇರಿದಿದ್ದು, ಈ ಪ್ರಕರಣ ಸಂಬಂಧ ಮೂವರು ಆರೋಪಿಗಳು ಬಂಧನವಾಗಿದ್ದಾರೆ. ಚಾಕು ಇರಿದು ಪರಾರಿಯಾಗುತ್ತಿದ್ದ ಕಿಡಿಗೇಡಿಗಳನ್ನು ಪೊಲೀಸರು ಚೇಸಿಂಗ್ ಮಾಡಿ ಹಿಡಿದಿದ್ದಾರೆ.
ಸದ್ಯ ಮೂವರನ್ನು ಹಿಡಿದು ಅರೆಸ್ಟ್ ಮಾಡಿದ್ದು, ಇನ್ನುಳಿದವರ ಮಾಹಿತಿ ಸಂಗ್ರಹಿಸಿ ಬಂಧನ ಮಾಡಲು ನಿರ್ಧರಿಸಿದ್ದಾರೆ. ಮೇಲ್ನೋಟಕ್ಕೆ ಗಾಂಜಾ ಮತ್ತಿನಲ್ಲಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗುತ್ತಿದೆ.
ನಿನ್ನೆ ರಾತ್ರಿ ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ಗಣಪತಿ ಮೆರವಣಿಗೆಯಲ್ಲಿ, ಡ್ಯಾನ್ಸ್ ಮಾಡುವ ವೇಳೆ ಕಾಲು ತಾಗಿದ್ದಕ್ಕೆ, ಮೂವರು ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಚಾಕು ಇರಿದಿದ್ದಾರೆ. ಪ್ರವೀಣ್ ಗುಂಡ್ಯಾಗೋಳ್ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.