ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಉಡುಗಣಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ "ಶಾಲಾ ಶತಮಾನೋತ್ಸವ ಸಮಾರಂಭ ಹಾಗೂ ಶಾಲಾ ವಾರ್ಷಿಕೋತ್ಸವ ಸಂಭ್ರಮ"ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು. ನೂರು ವರ್ಷ ಪೂರೈಸಿರುವ ಉಡುಗಣಿ ಗ್ರಾಮದ ಈ ಶಾಲೆಯು ಕೊಠಡಿಗಳ ಕೊರತೆಯಿಂದ ವಿದ್ಯಾರ್ಥಿಗಳಿಗೆ ತೊದರೆಯಾಗುತ್ತಿದ್ದು ಸ್ಥಳೀಯ ಗ್ರಾಮಸ್ಥರು, ಎಸ್.ಡಿ.ಎಂ.ಸಿ ಹಾಗೂ ಅಧ್ಯಕ್ಷರು ಪದಾಧಿಕಾರಿಗಳು ಮೂರು ಶಾಲಾ ಕೊಠಡಿಗಳನ್ನು ನೀಡುವಂತೆ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ ಕೂಡಲೇ 3 ಹೊಸ ಕೊಠಡಿ ನಿರ್ಮಾಣಕ್ಕೆ ಅನುದಾನ ನೀಡುವುದಾಗಿ ಘೋಷಿಸಿದ್ದಾರೆ.
ಈ ವೇಳೆ ಬಿಇಒ ಶ್ರೀ ಲೋಕೇಶ್, ಜನಪ್ರತಿನಿಧಿಗಳು, ಶಾಲಾ ಸಿಬ್ಬಂದಿ ವರ್ಗ, ಎಸ್.ಡಿ.ಎಂ.ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
