ಇಂದು ಬೆಳಗಾವಿ ಅಧಿವೇಶನದ ಕೊನೆಯ ದಿನ. ಸರ್ಕಾರವನ್ನು ಕಟ್ಟಿಹಾಕಲು ಮುಂದಾಗಿರುವ ಜೆಡಿಎಸ್ ನಾಯಕರಿಗೆ, ಇದೀಗ ಮಾಜಿ ಸಚಿವ ಜಿ.ಟಿ.ದೇವೇಗೌಡರೇ ಮುಳ್ಳಾದಂತೆ ಕಾಣುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಸಮರ ಸಾರಿದ್ದ ಬಿಜೆಪಿ-ಜೆಡಿಎಸ್ ಹೋರಾಟಕ್ಕೆ ಸಾಥ್ ಕೊಡದೇ ಹಿಂದುಳಿದಿದ್ದರು. ಸದನಕ್ಕೆ ಹಾಜರಾದರೂ ಸರ್ಕಾರದ ವೈಫಲ್ಯಗಳನ್ನು ಟೀಕಿಸಿಲ್ಲ. ಈ ಮೂಲಕ ಮೈತ್ರಿ ನಾಯಕರಿಗೆ ಮುಜುಗರ ತಂದಿದ್ದಾರೆ. ಹೀಗಾಗಿ ದೇವೇಗೌಡ ಮನವೊಲಿಕೆಗೆ ದಳಪತಿಗಳು ಮುಂದಾಗಿದ್ದಾರೆ.