ಕರ್ನಾಟಕ
ಗಾಂಧಿ ಕಾಂಗ್ರೆಸ್‌ಗೂ ಇಂದಿನ ಕಾಂಗ್ರೆಸ್‌ಗೂ ಸಂಬಂಧವೇ ಇಲ್ಲ : ಜೋಶಿ
ನಿಮ್ಮದು ಮೂಲ ಕಾಂಗ್ರೆಸ್ ಅಲ್ಲ, ಅದು ಇಂದಿರಾ ಕಾಂಗ್ರೆಸ್,, ಈ ಕಾಂಗ್ರೆಸ್‌ಗೆ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯದಲ್ಲಿ ನಂಬಿಕೆ ಇಲ್ಲ ಮತ್ತು ಬಿ.ಆರ್.ಅಂಬೇಡ್ಕರ್ ಅವರಿಗೆ ಅಗೌರವ ತೋರುತ್ತಿದೆ ಅಂತಾ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಶತಮಾನೋತ್ಸವ ಆಚರಣೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಬೃಹತ್ ಸಮಾವೇಶಕ್ಕಾಗಿ ಕಾಂಗ್ರೆಸ್‌ನವರು ಸರ್ಕಾರದ ಹಣವನ್ನ ನೀರಿನಂತೆ ಖರ್ಚು ಮಾಡುತ್ತಿದ್ದಾರೆ ಅಂತಾ ಆರೋಪಿಸಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಲ್ಹಾದ್ ಜೋಶಿ, ಮಹಾತ್ಮ ಗಾಂಧಿ ಕಾಂಗ್ರೆಸ್‌ಗೂ ಮತ್ತು ಇಂದಿನ ಕಾಂಗ್ರೆಸ್‌ಗೂ ಸಂಬಂಧವೇ ಇಲ್ಲ. ನಿಮ್ಮದು ಮೂಲ ಕಾಂಗ್ರೆಸ್ ಅಲ್ಲ, ಅದು ಇಂದಿರಾ ಕಾಂಗ್ರೆಸ್,, ಈ ಕಾಂಗ್ರೆಸ್‌ಗೆ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯದಲ್ಲಿ ನಂಬಿಕೆ ಇಲ್ಲ ಮತ್ತು ಬಿ.ಆರ್.ಅಂಬೇಡ್ಕರ್ ಅವರಿಗೆ ಅಗೌರವ ತೋರುತ್ತಿದೆ ಅಂತಾ ಆರೋಪಿಸಿದ್ದಾರೆ.