ವೈರಲ್

ತುಮಕೂರು! ಮಳೆಯ ಅವಾಂತರಕ್ಕೆ ಮಹಿಳೆ ಬಲಿ..!

ಮಣ್ಣಿನಡಿ ಸಿಲುಕಿದ್ದ ಸಹನಾಳನ್ನ ಗ್ರಾಮಸ್ಥರು ರಕ್ಷಣೆ ಮಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಹನಾಳನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಈ ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು : ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆಯೊಂದು ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಜಿ. ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಹನಾ (27) ಎಂಬ ಮೃತ ದುರ್ದೈವಿ.

ಸಹನಾ ಬೆಳಗ್ಗೆ ಸ್ನಾನಕ್ಕೆ ತೆರಳಿದ್ದ ವೇಳೆ ಗೋಡೆ ಕುಸಿದು ಮಣ್ಣಿನಡಿ ಸಿಲುಕಿದ್ದರು. ಮಣ್ಣಿನಡಿ ಸಿಲುಕಿದ್ದ ಸಹನಾಳನ್ನ ಗ್ರಾಮಸ್ಥರು ರಕ್ಷಣೆ ಮಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಹನಾಳನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಈ ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.